ಮಡಿಕೇರಿ ಜು.12 NEWS DESK : ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 16.40 ರಲ್ಲಿ ರಸ್ತೆ ಬದಿ ಬಿರುಕು ಬಿಟ್ಟು ಕುಸಿಯುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಸೆಪ್ಟೆಂಬರ್, 09 ರವರೆಗೆ (ದಿನಾಂಕ 09.09.2024ರ ವರೆಗೆ) ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ (ಸರಪಳಿ ಕಿ.ಮೀ 16.40 ತೋರ ಹತ್ತಿರ) ಕುಸಿದಿರುವ ಭಾಗದಲ್ಲಿನ 400 ಮೀಟರ್ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಸಾರ್ವಜನಿಕರು ತೋರ–ಕೆದಮುಳ್ಳೂರು-ಬೋಯಿಕೇರಿ ಮಾರ್ಗ, ತೋರ-ಹೆಗ್ಗಳ–ಆರ್ಜಿ ಮಾರ್ಗವಾಗಿ ಬದಲಿ ರಸ್ತೆ ಬಳಸಬಹುದಾಗಿದೆ. ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.