ಮಡಿಕೇರಿ ಜು.12 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರ ಅರಣ್ಯ ಭೂಮಿ, ಮರಗಳ ಹಕ್ಕು ಮತ್ತು ವನ್ಯಜೀವಿ ವಸ್ತುಗಳ ಕುರಿತು ಜನವಿರೋಧಿಯಾಗಿ ಹೊರಡಿಸಿರುವ ಸುತ್ತೋಲೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುವಷ್ಟರಲ್ಲೆ ಜಿಲ್ಲೆಯ ಜನತೆಗೆ ಮಾರಕವಾಗುವ ಸುತ್ತೋಲೆಗಳನ್ನು ಹೊರಡಿಸಿದೆ. ಜಿಲ್ಲೆಯ ಬೆಳೆಗಾರರ ಮರದ ಹಕ್ಕಿಗೆ ಚ್ಯುತಿಯನ್ನುಂಟು ಮಾಡುವ ಮತ್ತು ವನ್ಯಜೀವಿ ವಸ್ತುಗಳ ಕುರಿತು ಜನರ ಭಾವನೆಗೆ ದಕ್ಕೆ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದರು.
ಅರಣ್ಯ ಸಂಪತ್ತಿನ ರಕ್ಷಣೆಗಾಗಿ 1976 ರ ಮರಗಳ ಸಂರಕ್ಷಣಾ ಕಾಯ್ದೆ ಇದ್ದು, ಅದರಲ್ಲಿ ಅತ್ಯಂತ ವಿವರವಾಗಿ ಯಾವ ಮರಗಳನ್ನು ಕಡಿಯಬಹುದು, ಸಂರಕ್ಷಿಸಬೇಕೆನ್ನುವ ವಿವರಗಳಿದೆ. ಹೀಗಿರುವಾಗ ಅನಗತ್ಯವಾಗಿ ಮರಗಳ ಸರ್ವೇ ಸುತ್ತೋಲೆಯನ್ನು ಹೊರಡಿಸುವ ಮೂಲಕ ಜಿಲ್ಲೆಯ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.
::: ಇಒ, ಪಿಡಿಒಗಳಿಗೆ ಸುತ್ತೋಲೆ :::
ಪ್ರಸ್ತುತ ಸರ್ಕಾರ ಅರಣ್ಯ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಅದಕ್ಕೆ ನಿವೃತ್ತ ಅಧಿಕಾರಿ ರೇಣುಕಾಂಬ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇತ್ತೀಚೆಗೆ ಇವರು ಅರಣ್ಯ ವಿಚಾರಗಳಿಗೆ ಸಂಬಂಧ ಪಡದ ತಾಲ್ಲೂಕು ಪಂಚಾಯ್ತಿಗಳ ಇಒ ಮತ್ತು ಗ್ರಾ.ಪಂ ಪಿಡಿಒಗಳಿಗೆ ಸುತ್ತೋಲೆಯೊಂದನ್ನು ಹೊರಡಿಸಿ, ಅವರ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಅರಣ್ಯಭೂಮಿಯ ಬಗ್ಗೆ ವಿವರವಾದ ಮಾಹಿತಿ ಒದಗಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಮೀಸಲು ಅರಣ್ಯವನ್ನು ವಿಸ್ತರಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.
ಈಗ ಇರುವ ಅರಣ್ಯ ಪ್ರದೇಶಗಳನ್ನು ಮೊದಲು ಸಂರಕ್ಷಿಸಲಿ ಎಂದು ಒತ್ತಾಯಿಸಿದ ಬೋಪಯ್ಯ ಅವರು, ಅರಣ್ಯ ಕಾನೂನು ಜಾರಿಗೆ ಬಂದು ಸುಮಾರು 50 ವರ್ಷ ಕಳೆದಿದ್ದು, ಈ ಅವಧಿಯಲ್ಲಿ ತಲೆದೋರದ ಸಮಸ್ಯೆ ಈಗಿನ ಕಾಂಗ್ರೆಸ್ ಸರ್ಕಾರದಿಂದ ಎದುರಾಗಿದೆ ಎಂದು ಟೀಕಿಸಿದರು.
ಅರಣ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಆಯಾ ಪಂಚಾಯ್ತಿ ವ್ಯಾಪ್ತಿಯ ಅರಣ್ಯದ ಮಾಹಿತಿ ಬೇಕಿದ್ದಲ್ಲಿ ಅದನ್ನು ಸಂಬಂಧ ಪಟ್ಟ ಕಂದಾಯ ಇಲಾಖೆಯಿಂದ ಪಡೆಯಬೇಕೇ ಹೊರತು ಪಂಚಾಯ್ತಿ ಅಧಿಕಾರಿಗಳಿಂದ ಅಲ್ಲ. ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದ ಕೊಟ್ಟಗೇರಿಯಲ್ಲಿರುವ 8 ಏಕರೆ ದೇವರಕಾಡು, ಹುದಿಕೇರಿಯ ಹೈಸೊಡ್ಲೂರುವಿನ ದೇವರಕಾಡುಗಳ ಸ್ಥಿತಿಗತಿಗಳ ಬಗ್ಗೆ ಇವರು ಮಾಹಿತಿ ಕೇಳಿದ್ದಾರೆ. ಅಲ್ಲದೆ ಇನ್ನೂ ಕೆಲವು ಗ್ರಾ.ಪಂ ಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗಿನ ಸಂಸ್ಕøತಿ, ಧಾರ್ಮಿಕ ಪರಂಪರೆಗಳಲ್ಲಿ ಪ್ರಾಣಿಜನ್ಯವಾದ ಕೊಂಬು ಮೊದಲಾದವನ್ನು ದೇವರ ಉತ್ಸವಗಳಲ್ಲಿ ಬಳಸಲಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಲ್ಲಿ ಜಾರಿಗೆ ಬಂದ ಸಂದರ್ಭದಿಂದಲೆ ಯಾರೆಲ್ಲ ವನ್ಯಜೀವಿಗೆ ಸಂಬಂಧಪಟ್ಟ ವಸ್ತುಗಳನ್ನು ಇರಿಸಿಕೊಂಡಿದ್ದಾರೋ ಅದನ್ನೂ ಘೋಷಿಸಿಕೊಳ್ಳಬೇಕೆಂದು ತಿಳಿಸಲಾಗಿದೆ. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ವನ್ಯಜೀವಿ ಉತ್ಪನ್ನಗಳನ್ನು ಹಿಂದಿರುಗಿಸುವ ಸುತ್ತೋಲೆ ಹೊರಡಿಸಿ ಅನಗತ್ಯ ಗೊಂದಲವನ್ನು ಹುಟ್ಟು ಹಾಕಿದೆ. ಈ ಸುತ್ತೋಲೆ ಹೊರಡಿಸಿದ್ದು ಕಾಂಗ್ರೆಸ್ ಸರ್ಕಾರ, ಸಂಬಂಧಪಟ್ಟ ಸಚಿವರು ಕಾಂಗ್ರೆಸ್‍ನವರೆ ಆಗಿದ್ದಾರೆ.
ಆದರೆ ಸೋಜಿಗವೆಂದರೆ ಇಂತಹ ಸುತ್ತೋಲೆಗೆ ತಡೆಯಾಜ್ಞೆ ತಂದವರು ಕಾಂಗ್ರೆಸ್ ನವರೇ ಆಗಿದ್ದು, ಅದನ್ನೇ ದೊಡ್ಡ ವಿಚಾರ ಎನ್ನುವಂತೆ ಬಿಂಬಿಸಿಕೊಳ್ಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಇಬ್ಬರು ಶಾಸಕರು ಜಿಲ್ಲೆಯ ಜನರ ಬಗ್ಗೆ ಕಾಳಜಿ ತೋರಿ ಸುತ್ತೋಲೆ ಹಿಂದಕ್ಕೆ ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಬೋಪಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್ ಹಾಗೂ ವಕ್ತಾರ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.
Breaking News
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*
- *ಬೊಳ್ಳಮ್ಮಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ*