ಮಡಿಕೇರಿ ಜು.13 NEWS DESK : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರು ಮತ್ತು ಸದಸ್ಯರ ವಿವರ ಇಂತಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಅಧ್ಯಕ್ಷರಾಗಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಮಹಮ್ಮದ್ ಸವಾದ್, ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಶೈಕ್ಷಣಿಕ ಮಂಡಳಿ ಸದಸ್ಯರಾದ ಡಾ.ವೈ.ನಾರಾಯಣ, ಮೂಡಬಿದಿರೆಯ ಐಕಳ ಪಾಂಪೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ ಕರಂಗಲ್ಲು, ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಬಿ.ಕೆ.ಸರೋಜಿನಿ, ಕನಕಮಜಲು ಗ್ರಾಮದ ಲಕ್ಷ್ಮಿನಾರಾಯಣ ಕಜೆಗದ್ದೆ, ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಿತ್ರ, ಬಂಟ್ವಾಳ ತಾಲ್ಳೂಕಿನ ಬೆಂಜನ ಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಪಕರಾದ ಡಾ.ದಾಮೋದರ ನಾರಾಲು, ಚೆಂಬು ಗ್ರಾಮದ ಸ್ಮಿತಾ ಅಮೃತರಾಜ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಇವರು ಸದಸ್ಯರಾಗಿರುತ್ತಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಅವರು ಖಾಯಂ ಸದಸ್ಯರಾಗಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅರೆಭಾಷೆ ಸಂಶೋಧನಾ ಕೇಂದ್ರದ ಸಂಯೋಜಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.