ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾ ವಿಶ್ವವಾಣಿ ಪತ್ರಿಕೆಯ ವರದಿಗಾರ ಹಾಗೂ ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರ ಅನಿಲ್ ಹೆಚ್.ಟಿ. ಅವರಿಗೆ ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ಥಾಪಿಸಿರುವ ದತ್ತಿ ನಿಧಿ ಪ್ರಶಸ್ತಿ ಲಭಿಸಿದೆ.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಕಾಸರಗೋಡು ಸೀತಂಗೋಳಿ ಗ್ರಾಮದ ಲಯನ್ಸ್ ಸಭಾಭವನದಲ್ಲಿ ನಡೆದ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಪಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭ ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್, ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.