ವಿರಾಜಪೇಟೆ ಜು.13 NEWS DESK : ತಿತಿಮತಿ ಸರ್ಕಾರಿ ಪಿಯು ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ.ರಾಜೇಂದ್ರ ಪ್ರಸಾದ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಹತಾಶರಾಗದೇ ಏಕಾಗ್ರತೆಯಿಂದ ತಮ್ಮ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.
ದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
ತಿತಿಮತಿ ವಿಎಸ್ಎಸ್ ಎನ್ ನ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು. ಮತ್ತು ವಿದ್ಯಾರ್ಥಿ ಸಂಘದಲ್ಲಿ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.
ಸ್ಥಳೀಯರು ಹಾಗೂ ಸಮಾಜ ಸೇವಕರಾದ ಮನು ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಪ್ರತೀ ಹಂತದಲ್ಲೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಚಾರ್ಲ್ಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿತಿಮತಿ ಗ್ರಾ.ಪಂ ಸದಸ್ಯ ಅನೂಪ್ ಕುಮಾರ್, ತಿತಿಮತಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಮಂಗಳ, ಕಾಲೇಜು ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ ಹೇಮಾವತಿ ಸ್ವಾಗತಿಸಿ, ಪಲ್ಲವಿ ನಿರೂಪಿಸಿ, ಪೃಥ್ವಿ ವಂದಿಸಿದರು. ಇದೇ ಸಂದರ್ಭ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲಾಯಿತು.