ಮಡಿಕೇರಿ ಜು.13 NEWS DESK : ಕೊಂಡಂಗೇರಿ ಎಲಿಯನ್ -ಗಾಡ್ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಜಾತ್ಯತೀತ ಜನತಾದಳದ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಅಶ್ವಿನಿ, ಶಿಕ್ಷಕರಾದ ಯಮುನ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎ.ಅಬ್ಬಾಸ್, ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್, ಬೇಬಿ, ವಿರಾಜಪೇಟೆ ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಸೈಫುದ್ದೀನ್, ನಜೀರ್ ಮತ್ತಿತರರು ಉಪಸ್ಥಿತರಿದ್ದರು.










