ಮಡಿಕೇರಿ ಜು.14 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಕದಳಿ ವೇದಿಕೆಯ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಿರಾಜಪೇಟೆಯ ಆರ್ಜಿ ಗ್ರಾಮದ ಸಾಹಿತಿ ರಜಿತಾ ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ವಚನ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕದಳಿ ವೇದಿಕೆ ಕೊಡಗು ಜಿಲ್ಲಾಧ್ಯಕ್ಷೆ ಜಲಜಾ ಶೇಖರ್ ನೇಮಕ ಮಾಡಿದ್ದಾರೆ.