ವಿರಾಜಪೇಟೆ ಜು.14 NEWS DESK : ವಿರಾಜಪೇಟೆಯ ರೋಟರಿ ಶಾಲೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ವಿರಾಜಪೇಟೆಯ ವೃತ್ತ ನಿರೀಕ್ಷಕರಾದ ಶಿವರುದ್ರ ಉಪಸ್ಥಿತರಿದ್ದು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಬಿ. ಮಾದಪ್ಪ ವಹಿಸಿದ್ದರು. ಶಾಲಾ ಸಂಸತ್ತಿಗೆ ಚುನಾವಣೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ವಿವಿಧ ಇಲಾಖೆಯ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಹೆಚ್.ಜೆ. ವಿಶಾಲಾಕ್ಷಿ ಹಾಗೂ ರೋಟರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹಸೀನಾ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು.