ಮಡಿಕೇರಿ ಜು.14 NEWS DESK : ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2023 ನೇ ಸಾಲಿನ ಅತ್ಯುತ್ತಮ ಶೈಕ್ಷಣಿಕ ವರದಿ ವಾರ್ಷಿಕ ಪ್ರಶಸ್ತಿಗೆ ಬಡಕಡ ರಜಿತ ಕಾರ್ಯಪ್ಪ ಭಾಜನರಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “8 ಶಾಲೆಗಳಲ್ಲಿ ಏಕೋಪಾಧ್ಯಾಯರು! ” ಎಂಬ ಶೈಕ್ಷಣಿಕ ವರದಿಗೆ ಈ ಪ್ರಶಸ್ತಿ ಲಭಿಸಿದೆ. 17 ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.