ಸುಂಟಿಕೊಪ್ಪ ಜು.14 NEWS DESK : ಪಿಯುಸಿ ವಿದ್ಯಾರ್ಥಿಗಳ ವ್ಯಾಸಂಗ ಭವಿಷ್ಯದ ಪ್ರಮುಖ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಚಲಿತರಾಗದೆ ವಿದ್ಯಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಸುಂಟಿಕೊಪ್ಪ ಪೊಲೀಸ್‌ಠಾಣೆಯ ಪಿಎಸ್‌ಐ ಶ್ರೀಧರ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಅವರು ಹದಿಹರೆಯದಲ್ಲಿ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಮೊಬೈಲ್‌ನ ದಾಸರಾಗಬಾರದು, ರಸ್ತೆ ಸುರಕ್ಷತೆ ಬಗ್ಗೆ ಆರಿತುಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಅವರು ಉದ್ಘಾಟಿಸಿ ಮಾತನಾಡಿ ಕಾಲೇಜಿನ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿ ಸಂಘಕ್ಕೆ ಶುಭಹಾರೈಸಿದರು. ಜೀವಶಾಸ್ತç ಉಪನ್ಯಾಸಕಿಯಾದ ಪದ್ಮಾವತಿ ಪ್ರತಿಜ್ಞಾನ ವಿಧಿ ಭೋಧಿಸಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ವ್ಯಾಸಂಗದ ಅವಧಿಯಲ್ಲಿಯೇ ಅವರುಗಳು ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಕಾಲೇಜಿನಲ್ಲಿ ಪ್ರಜಾಸತ್ತಾತ್ಮಕ ನೀತಿಯನ್ನು ಚುನಾವಣೆ ನಡೆಸಿ ವಿದ್ಯಾರ್ಥಿ ಸಂಘವನ್ನು ರಚಿಸಲಾಗಿದೆ ಎಂದು ಹೇಳಿದರು. ಕಾಲೇಜಿನ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾಥಿಒðಗಳಿಗೆ ಪ್ರಾಂಶುಪಾಲರು ಪ್ರತಿಭಾ ಪುರಸ್ಕಾರ ನೀಡಿದರು. ನಿಶಾ ಸ್ವಾಗತಿಸಿ,ಕಿಶೋರ್ ಮತ್ತು ಜೋಸ್ನಾರವಿ ನಿರೂಪಿಸಿದರು ಮತ್ತು ಸಮಿರ ವಂದಿಸಿದರು.