ಮಡಿಕೇರಿ ಜು.15 NEWS DESK : ಕಕ್ಕಬ್ಬೆ ಭಾಗದ ಹಲವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಡಿಸಿಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹಾಗೂ ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸಂಪಬ್ ಅಯ್ಯಪ್ಪ ಮುಂದಾಳತ್ವದಲ್ಲಿ ವಿರಾಜಪೇಟೆಯ ಶಾಸಕ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.









