

ಮಡಿಕೇರಿ ಜು.15 NEWS DESK : ರಾಷ್ಟ್ರಮಟ್ಟದ ಚಾಂಪಿಯನ್‍ಶಿಪ್ ನಲ್ಲಿ ವಿರಾಜಪೇಟೆಯ ಕಾವೇರಿ ಶಾಲೆ ವಿದ್ಯಾರ್ಥಿನಿ ಚಿನ್ನದ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಗೋವಾದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರಮಟ್ಟದ ಬಾಲಕಿಯರ ಥ್ರೋ ಬಾಲ್ ಚಾಂಪಿಯನ್ ಶಿಪ್‍ನಲ್ಲಿ ಕಾವೇರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಬಿ.ಎಸ್.ತನ್ಯ ರೈ ಚಿನ್ನದ ಪದಕ ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾಳೆ. ಈ ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿಯರು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದರು.













