ಬೆಂಗಳೂರು, ಜು.15 NEWS DESK : ವಿಧಾನಸೌಧದ ಪಶ್ಚಿಮ ದ್ವಾರವನ್ನು ನವೀಕರಿಸಲಾಗಿದ್ದು, ನವೀಕೃತ ಬಾಗಿಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನನನ್ನೂ ಒಳಗೊಂಡಂತೆ, ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು ಸೇರಿ ಸಂತೋಷದಿಂದ ಉದ್ಘಾಟಿಸಿದ್ದೇವೆ ಎಂದು ಹೇಳಿದರು.
ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.