ಮಡಿಕೇರಿ ಜು.15 NEWS DESK : 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು.
ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು. ಈ ಯೋಜನೆಯ ವಿಮೆ ನೋಂದಣಿಗೆ ಜುಲೈ, 31 ಕೊನೆಯ ದಿನವಾಗಿದೆ.
2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ ಇಂತಿದೆ.
ಕಾಳು ಮೆಣಸು ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ (ರೂ.ಗಳಲ್ಲಿ) ರೂ.47000, ಪ್ರತಿ ಹೆಕ್ಟೇರ್ಗೆ ವಿಮಾ ಕಂತು(ಶೇ.30) ರೂ.14,100 ಮತ್ತು ರೈತರು ಪಾವತಿಸಬೇಕಾಗಿರುವ ಕಂತು(ಶೇ.5) ರೂ.2350.
ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ (ರೂ.ಗಳಲ್ಲಿ) ರೂ.1,28,000, ಪ್ರತಿ ಹೆಕ್ಟೇರ್ಗೆ ವಿಮಾ ಕಂತು(ಶೇ.30) ರೂ.38,400 ಮತ್ತು ರೈತರು ಪಾವತಿಸಬೇಕಾಗಿರುವ ಕಂತು(ಶೇ.5) ರೂ.6,400 ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ರೈತರು ಕೂಡಲೇ ಸಮೀಪದ ಬ್ಯಾಂಕ್ ಶಾಖೆ, ಆಥವಾ ಕ್ಷೇಮಾ ಜನರಲ್ ಇನ್ಸೂರೆನ್ಸ್ ಕಂಪನಿ(ನವೀನೆಶ್: 7760076574, ಹರೀಶ್ 8970456510) ಅಥವಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್ಸಿ) ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ತಿಳಿಸಿದ್ದಾರೆ.