ಮಡಿಕೇರಿ ಜು.17 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪ್ರಥಮ ಸರ್ವ ಸದಸ್ಯರ ಸಭೆಯು ಅಕಾಡೆಮಿ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಸದಸ್ಯರ ಅಭಿಪ್ರಾಯಗಳೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡುವಂತೆ ಒಮ್ಮತದ ತೀರ್ಮಾನಕ್ಕೆ ಬರಲಾಯಿತು.
ಕಕ್ಕಡ 18 ಹಾಗೂ ಬೇಲ್‍ನಮ್ಮೆ ಕಾರ್ಯಕ್ರಮವನ್ನು ಸಂಸ್ಕೃತಿಯ ಅನಾವರಣದೊಂದಿಗೆ ಮಡಿಕೇರಿ, ಅಮ್ಮತ್ತಿ, ಪೊನ್ನಂಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ನಡೆಸಲು ಸದಸ್ಯರಿಗೆ ಜವಾಬ್ದಾರಿ ಕೊಡಲಾಯಿತು.
ಮಂಗಳೂರಿನಲ್ಲಿ ಆಯೋಜಿಸಲಿರುವ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಕೊಡವ ಸಂಸ್ಕೃತಿ ಹಾಗೂ ಸಾಹಿತ್ಯದ ಪ್ರದರ್ಶನಗಳೊಂದಿಗೆ ನಡೆಸುವಂತೆ ಹಾಗೂ ಇದಕ್ಕೆ ಪೂರ್ವಕವಾಗಿ ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಲವು ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲು ತೀರ್ಮಾನಿಸಲಾಯಿತು.
ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಿರುಚಿತ್ರ ಸ್ಪರ್ಧೆಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಮತ್ತು ವಿದ್ಯಾ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳುವಂತೆ ತೀರ್ಮಾನಿಸಲಾಯಿತು.
ಕರ್ನಾಟಕ ಏಕೀಕರಣ ಹಾಗೂ ಕೊಡವ ಭಾಷೆ, ಸಂಸ್ಕೃತಿಯಿಂದ ಕನ್ನಡದ ಬೆಳವಣಿಗೆ ಒಳಗೊಂಡಂತೆ ಮಕ್ಕಳಿಗೆ ಏರ್ಪಡಿಸಲಾಗಿರುವ ಸ್ಪರ್ಧಾ ಕಾರ್ಯಕ್ರಮಗಳಿಗೆ ಪ್ರತಿ ವಿದ್ಯಾಸಂಸ್ಥೆಗಳಿಂದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ಕಳುಹಿಸಿಕೊಡುವಂತೆ ತೀರ್ಮಾನಿಸಲಾಯಿತು.
ಎಲ್ಲಾ ಕಾರ್ಯಕ್ರಮಗಳಿಗೆ ಅಕಾಡೆಮಿಯ ಸದಸ್ಯರ ಸಂಚಾಲಕತ್ವ ಹಾಗೂ ಜಿಲ್ಲೆಯ ನುರಿತ ತಜ್ಞ ವ್ಯಕ್ತಿಗಳನ್ನು ಆಹ್ವಾನಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸುವಂತೆ ತೀರ್ಮಾನಿಸಲಾಯಿತು. ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಈಗಾಗಲೇ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರುಗಳೊಂದಿಗೆ ಸರ್ವ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಸಭೆ ನಡೆದಿದ್ದು, ಆಚರಣೆಯನ್ನು ಯಶಸ್ವಿಗೊಳಿಸುವಲ್ಲಿ ಸರ್ವರ ಸಹಕಾರ ಕೋರಲಾಯಿತು.
ಸಭೆಯಲ್ಲಿ ಸ್ಥಾಯಿ ಸಮಿತಿ ಹಾಗೂ ಪ್ರಕಟಣೆ ಸಮಿತಿಗೆ ಅಧ್ಯಕ್ಷರು ಹಾಗೂ ರಿಜಿಸ್ಟ್ರಾರ್ ಒಳಗೊಂಡಂತೆ ನೇಮಿಸಲಾಯಿತು.
ಸಭೆಯಲ್ಲಿ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಡ ದಿನು ಬೋಜಪ್ಪ, ಕೊಡಿಜಮ್ಮಂಡ ಎಂ.ಬಾಲಕೃಷ್ಣ, ಪೊನ್ನೀರ ಯು.ಗಗನ್, ಕುಡಿಯರ ಕಾವೇರಪ್ಪ, ನಾಯಂದೀರ ಆರ್.ಶಿವಾಜಿ, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ಚೊಟ್ಟೆಯಂಡ.ಎ.ಸಂಜು ಕಾವೇರಪ್ಪ, ನಾಪಂಡ ಸಿ.ಗಣೇಶ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಹಾಗೂ ಅಕಾಡೆಮಿಯ ರಿಜಿಸ್ಟ್ರಾರ್ ಗಿರೀಶ್ ಹಾಜರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*