ನಾಪೋಕ್ಲು ಜು.17 NEWS DESK : ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸತತ ಪರಿಶ್ರಮ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಹಾಗೂ ಶಾಲೆಯಲ್ಲಿ ನಡೆಸುವ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲೆ ಕೆ.ಡಿ.ನೀತಾ ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ 6 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳ ಮೊದಲನೇ “ಪೋಷಕರ ಸಭೆ” ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆ ತರಬೇತಿ ನೀಡಲು “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ 2023-24ನೇ ಸಾಲಿನಲ್ಲಿ ಒಂಬತ್ತನೆ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಕೆ.ಎಂ. ಖುಷಿ ಅವರಪೋಷಕರು ‘ವೃತ್ತಿ ಮಾರ್ಗದರ್ಶನ’ ಕ್ಕೆ ಚಾಲನೆ ನೀಡಿದರು.
ಶಾಲಾ ದೈಹಿಕ ಶಿಕ್ಷಕಿ ಶ್ಯಾಮಿಲಿ ವೃತ್ತಿ ತರಬೇತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಗಣಕಯಂತ್ರ ಶಿಕ್ಷಕಿ ಸುಶ್ಮಿತಾ 2023-24ನೇ ಯ ಹಾಗೂ ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಶಾಲೆಯಲ್ಲಿ ನಡೆಸಿದ ಶೈಕ್ಷಣಿಕ ಚಟುವಟಿಕೆಗಳ ವಿಡಿಯೋ ತುಣುಕನ್ನು ಪೋಷಕರಿಗೆ ತೋರಿಸಿ, ತಮ್ಮ ಮಕ್ಕಳ ಉತ್ತಮ ಬೆಳವಣಿಗೆಯ ಬಗ್ಗೆ ತಿಳಿದುಕೊಳ್ಳಲು ಸಹಕರಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ವೃಂದದವರು ಹಾಜರಿದ್ದರು. ಶಾಲಾ ಶಿಕ್ಷಕಿ ಚಶ್ಮಿ ನಿರೂಪಿಸಿದರು, ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಡಯಾನ ತಂಡದವರು ಪ್ರಾರ್ಥಿಸಿದರು, ಕೃತಿ ಸ್ವಾಗತಿಸಿದರು. ಚೆಂಗಪ್ಪ ವಂದಿಸಿದರು.
ವರದಿ : ದುಗ್ಗಳ ಸದಾನಂದ.