ಸುಂಟಿಕೊಪ್ಪ ಜು.17 NEWS DESK : ಕಾರು ಮತ್ತು ಆಟೋ ನಡುವೆ ಅಪಘಾತ ಸಂಭವಿಸಿರುವ ಘಟನೆ ಕೆದಕಲ್‍ನ 7ನೇ ಮೈಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಆಟೋ ಚಾಲಕ ಕಂಬಿಬಾಣೆಯ ಸಚ್ಚಿನ್ ಹಾಗೂ ಆಟೋದಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಸುಂಟಿಕೊಪ್ಪ ಪಿಎಸ್‍ಐ ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.










