ನಾಪೋಕ್ಲು ಜು.18 NEWS DESK : ಬಲ್ಲಮಾವಟ್ಟಿ ಗ್ರಾ.ಪಂ ವ್ಯಾಪ್ತಿಯ ನೆಲಜಿ ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ.
ಗ್ರಾಮದ ಶ್ರೀ ಭಗವತಿ ದೇವಾಲಯವನ್ನು ಹಿಂಬಾಗಿಲಿನಿಂದ ಪ್ರವೇಶಿಸಿದ್ದ ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದರು. ಘಟನಾ ಸ್ಥಳಕ್ಕೆ ಸ್ವಾನ ಹಾಗೂ ಬೆರಳಚ್ಚು ತಜ್ಞರು, ಪೊಲೀಸ್ ಠಾಣಾ ಅಧಿಕಾರಿ ಮಂಜುನಾಥ್. ಕ್ರೈಂ ಪಿಎಸ್ಐ ಶ್ರೀಧರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ : ದುಗ್ಗಳ ಸದಾನಂದ