ಮಡಿಕೇರಿ ಜು.18 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಹಲವೆಡೆ ಮನೆಗಳಿಗೆ ಹಾನಿಯಾಗಿದೆ.
ಹೆಚ್ಚಿನ ಮಳೆಯಿಂದ ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಮದೆ ಗ್ರಾಮದ ಮನೋಹರಿ ಹಾಗೂ ಸಂಪಾಜೆ ಗ್ರಾಮದ ಬಂಡನ ಸರೋಜನಿ ಎಂಬುವರ ಮನೆಯ ಮುಂದಿನ ಬರೆ ಕುಸಿದಿದ್ದು, ಸೋಮವಾರಪೇಟೆ ತಾಲೂಕಿನ ಬಿಳಕಿಕೊಪ್ಪ ಗ್ರಾಮದ ಸರಸ್ವತಿ ಎಂಬವರ ಮನೆ ಮೇಲೆ ತೀವ್ರ ಮಳೆಯಿಂದ ಮರ ಬಿದ್ದು ಮನೆ ಹಾನಿಯಾಗಿದೆ. ಕೊಡ್ಲಿಪೇಟೆ ಹೋಬಳಿ ಅವರೇದಾಳು ಗ್ರಾಮದ ಮೀನಾಕ್ಷಿ ರಂಗಯ್ಯ ಎಂಬುವರ ಮನೆ ಮೇಲ್ಚವಣಿ ಮುರಿದು ಬಿದ್ದಿದೆ. ಸೋಮವಾರಪೇಟೆ ಹೋಬಳಿ ಮೂವತ್ತೋಕ್ಲು ಗ್ರಾಮದ ಜಾನು ಬೇಡು ಅವರ ಮನೆ ಗೋಡೆ ವ್ಯಾಪಕ ಮಳೆಯಿಂದ ಕುಸಿದಿದೆ. ಕುಶಾಲನಗರ ಹೋಬಳಿ ಮಾದಾಪಟ್ಟಣ ಗ್ರಾಮದ ನಿವಾಸಿ ಜಯಮ್ಮ ಅವರ ವಾಸದ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಹಾನಿಯಾಗಿದ್ದು, ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದ್ದಾರೆ.
ಸೋಮವಾರಪೇಟೆ ಹೋಬಳಿಯ ದೊಡ್ಡಬೂರು ಗ್ರಾಮದ ಗೌರಿ ರಾಜು ಅವರ ವಾಸದ ಮನೆಯು ಭಾರಿ ಮಳೆ- ಗಾಳಿಗೆ ಮನೆಯ ಗೋಡೆ ಕುಸಿದಿದೆ.
ರಸ್ತೆ ಕುಸಿಯುವ ಭೀತಿ ಹಿನ್ನೆಲೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಬಂದ್ ಮಾಡಲಾಗಿದ್ದು, ಬದಲಿ ರಸ್ತೆಯಲ್ಲಿ ಸಂಚಾರ ಕಲ್ಪಿಸಲಾಗಿದೆ.
ನೀರಿನ ಮಟ್ಟ ಏರಿಕೆ : ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಮಳೆ ವಿವರ : : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 74.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.60 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1242.80 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 607.48 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 100.13 ಮಿ.ಮೀ. ಕಳೆದ ವರ್ಷ ಇದೇ ದಿನ 23.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2044.19 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1166.07 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 64.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1397.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 472.56 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 75.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.74 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1364.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 417.15 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 99.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1364.86 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 521.86 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 938.3 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 459.75 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 132.80, ನಾಪೋಕ್ಲು 57.80, ಸಂಪಾಜೆ 84.50, ಭಾಗಮಂಡಲ 125.40, ವಿರಾಜಪೇಟೆ 64.80, ಅಮ್ಮತ್ತಿ 64, ಹುದಿಕೇರಿ 87.60, ಶ್ರೀಮಂಗಲ 97.80, ಪೊನ್ನಂಪೇಟೆ 67, ಬಾಳೆಲೆ 50.09, ಸೋಮವಾರಪೇಟೆ ಕಸಬಾ 59.40, ಶನಿವಾರಸಂತೆ 75, ಶಾಂತಳ್ಳಿ 174, ಕೊಡ್ಲಿಪೇಟೆ 88.60, ಕುಶಾಲನಗರ 22.20, ಸುಂಟಿಕೊಪ್ಪ 45.20 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ :: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.82 ಅಡಿಗಳು. ಕಳೆದ ವರ್ಷ ಇದೇ ದಿನ 2845.73 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 14.60 ಮಿ.ಮೀ., ಕಳೆದ ವರ್ಷ ಇದೇ ದಿನ 3.20 ಮಿ.ಮೀ., ಇಂದಿನ ನೀರಿನ ಒಳಹರಿವು 10700 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2811 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 10000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.