ಮಡಿಕೇರಿ ಜು.18 NEWS DESK : ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕಳೆದ 9 ವರ್ಷಗಳಿಂದ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಆರ್.ಪಿ.ಚಂದ್ರಶೇಖರ್ ಅವರಿಗೆ ಶಾಲೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲೆ ಪಿ.ಕೆ.ನಳಿನಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಶಾಲೆಯ ದೈಹಿಕ ಶಿಕ್ಷಕ ಶ್ರೀನಿವಾಸ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಚಂದ್ರಶೇಖರ್ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್.ಪಿ.ಚಂದ್ರಶೇಖರ್, ಶಾಲೆಯ ಅಭಿವೃದ್ಧಿಗೆ ಮುಂದೆಯೂ ಸಹಕಾರ ನೀಡುವುದಾಗಿ ಚಂದ್ರಶೇರ್ ತಿಳಿಸಿದರು.
ಉಪ ಪ್ರಂಶುಪಾಲೆ ಕೆ.ವಿ.ಶಶಿಕಲಾ ಪ್ರಾಸ್ತಾವಿಕ ನುಡಿಗಳನ್ನಾಡಿ, ಶಾಲೆಯ ಅಭಿವೃದ್ಧಿಗೆ ಚಂದ್ರಶೇಖರ್ ಅವರು ಶ್ರಮ ವಹಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯರಾದ ಮೇಘನಾ ಹಾಗೂ ಶ್ರೇಷ್ಟ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಶಿಕ್ಷಕಿ ಐರಿನ್ ಉಷಾ ನಿರೂಪಿಸಿದರು. ವಿದ್ಯಾರ್ಥಿಗಳಾದ ಶಿವಕುಮಾರ್, ಚಂದ್ರ ಸ್ವರಚಿತ ಧನ್ಯವಾದ ಸಮರ್ಪಣೆ ಗಾಯನ ಮಾಡಿದರು. ಸಮಾಜ ವಿಜ್ಞಾನ ಶಿಕ್ಷಕಿ ಮಂದಾಕಿನಿ ವಂದಿಸಿದರು.