ಮಡಿಕೇರಿ ಜು.18 NEWS DESK : ಶೌಚಾಲಯದ ಗುಂಡಿಯಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿರುವ ಘಟನೆ ಕೊಳತೋಡು ಬೈಗೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಗಣೇಶ್ ಎಂಬವರ ಮನೆಯ ಶೌಚಾಲಯದಲ್ಲಿ ಕಾಡಾನೆ ಸಿಲುಕಿಕೊಂಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ರಕ್ಷಿಸಿ, ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಡಿಎಫ್‍ಓ ಜಗನ್ನಾಥ್, ಎಸಿಎಫ್ ನೆಹರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್‍ಎಫ್‍ಓ ಕೆ.ಎಂ.ದೇವಯ್ಯ, ಡಿಆರ್‍ಎಫ್‍ಒ ಸಂಜಿತ್ ಸೋಮಯ್ಯ ಸೇರಿದಂತೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.