ಮಡಿಕೇರಿ ಜು.18 NEWS DESK : ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬದವರಿಗೆ ಪ್ರವಾಹ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತರರು ಭೇಟಿ ನೀಡಿ ವೀಕ್ಷಿಸಿದರು.