ಮಡಿಕೇರಿ ಜು.18 NEWS DESK : 2023-24ರ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್(Pಒ USಂ) ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಗೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಯ್ಕೆಯಾಗಿದ್ದು, ಈ ಯೋಜನೆಯಡಿ ಸಂಸ್ಥೆಗೆ ಮೂಲಭೂತ ಸೌಕರ್ಯ ಮತ್ತು ನವೀಕರಣ ಕಾಮಗಾರಿಗಾಗಿ 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಸರಕಾರ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಯವರಿಗೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ.ತಿಳಿಸಿದ್ದಾರೆ.