ಮಡಿಕೇರಿ ಜು.18 NEWS DESK : ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ನೀಡುವ ಸಂಬಂಧ ತಾಲ್ಲೂಕುವಾರು ಮೌಲ್ಯಮಾಪನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿತ್ತು.
ಆದರೆ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷಚೇತನರಿಗೆ ಹಾಗೂ ಹಿರಿಯನಾಗರಿಕರಿಗೆ ಈ ಶಿಬಿರಕ್ಕೆ ಬಂದು ಹೋಗಲು ಅನಾನುಕೂಲವಾಗುವುದರಿಂದ ಮೌಲ್ಯಮಾಪನ ಶಿಬಿರವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.