ಮಡಿಕೇರಿ ಜು.18 NEWS DESK : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಪ್ರವಾಹದಿಂದ ಭೀತಿ ಎದುರಾಗಿದೆ. ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಅಧಿಕ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಹೊಳೆಕೆರೆ ಬದಿಯ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.













