ಮಡಿಕೇರಿ ಜು.19 NEWS DESK : ಪ್ರಸಕ್ತ (2024-25) ಸಾಲಿಗೆ ಮಡಿಕೇರಿ ತಾಲ್ಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ಮತ್ತು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮಡಿಕೇರಿ ಇಲ್ಲಿಗೆ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯಗಳ ವಿವರ: ಉಚಿತ ದಾಖಲಾತಿ(ಶುಲ್ಕ ರಹಿತ), ಉಚಿತ ಹಾಸ್ಟೇಲ್ ಸೌಲಭ್ಯ, ಮೆನು ಚಾರ್ಟ್ ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, ಪ್ರತಿ ತಿಂಗಳಿಗೆ ಉಚಿತ “ಶುಚಿ ಸಂಭ್ರಮ ಕಿಟ್” (ಸೋಪು, ಪೇಸ್ಟ್, ಬ್ರಷ್, ತೆಂಗಿನಎಣ್ಣೆ), ಉಚಿತ ಆರೋಗ್ಯ ತಪಾಸಣೆ, ಗ್ರಂಥಾಲಯ ಹಾಗೂ ಕಂಪ್ಯೂಟರ್ ಸೌಲಭ್ಯಗಳು
ಆಸಕ್ತ ವಿದ್ಯಾರ್ಥಿಗಳು, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ರವರ ಕಚೇರಿ ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ರವರ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಥಿಗಳು ಅರ್ಜಿಸಲ್ಲಿಸುವಾಗ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ 9480843155 ಹಾಗೂ 08272-200500ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.











