ಮಡಿಕೇರಿ ಜು.19 NEWS DESK : ಕುಶಾಲನಗರದ ಶ್ರೀ ಶಿರಡಿ ಸಾಯಿ ಟ್ರಸ್ಟ್ ವತಿಯಿಂದ ಜು.21 ರಂದು ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 6 ಗಂಟೆಗೆ ಕಾಕಡ ಆರತಿ, 6.30 ಗಂಟೆಗೆ ಗಣಪತಿ ಹೋಮ, 7 ಗಂಟೆಗೆ ಪಂಚಾಮೃತ ಅಭಿಷೇಕ, 8 ಗಂಟೆಯಿಂದ 11 ಗಂಟೆಯ ವರೆಗೆ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ, 9 ಗಂಟೆಯಿಂದ 12 ಗಂಟೆಯವರೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಜರುಗಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಶಿರಡಿ ಸಾಯಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9481818183, 9448504827, 9483094830 ಸಂಪರ್ಕಿಸಬಹುದಾಗಿದೆ.










