
ಮಡಿಕೇರಿ ಜು.19 NEWS DESK : ಬೇಗೂರು ಪಟ್ಟಕೇರಿ ಅಂಬಲ ಒಕ್ಕೂಟದ ವತಿಯಿಂದ ಜು.21 ರಂದು ಬೇಗೂರು ಗ್ರಾಮ ಮಟ್ಟದ 8ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ.
ಗ್ರಾಮದ ಬೆಜಾಂಡ ಪ್ರೇಮಾ ರಾಮು ಅವರ ಗದ್ದೆಯಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಕೊಡವಾಮೆ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೇರ ದಿನೇಶ್ ಬೆಳ್ಳಿಯಪ್ಪ, ಪೊನ್ನಪೇಟೆ ದೃತಿ ಕ್ಲಿನಿಕ್‍ನ ವೈದ್ಯಾಧಿಕಾರಿ ಡಾ.ಚೆಪ್ಪುಡೀರ ಕಾವೇರಿ ಪಾಲ್ಗೊಳ್ಳಲಿದ್ದಾರೆ.
ಗ್ರಾಮಸ್ಥರು ಮತ್ತು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಪಟ್ಟಕೇರಿ ಅಂಬಲ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೋರಿದ್ದಾರೆ.










