ಮಡಿಕೇರಿ ಜು.19 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆಗಸ್ಟ್, 10 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು. ಇಲಾಖಾ ವೆಬ್‍ಸೈಟ್ www.dom.karnataka.gov.in ಮತ್ತು ಕಚೇರಿ ದೂರವಾಣಿ ಸಂಖ್ಯೆ 08272-225528/ 220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.