ಮಡಿಕೇರಿ ಜು.19 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರ, ಕುಶಾಲನಗರ, ಅತ್ತೂರು ಮತ್ತಿತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಾಂತ್ವನ ಹೇಳಿ ಅಭಯ ನೀಡಿದರು. ಎನ್.ಡಿ.ಎಂ.ಎಫ್ ಮೂಲಕ ತಕ್ಷಣ ಪರಿಹಾರವನ್ನು ಒದಗಿಸಲು ಮತ್ತು ಅವರ ಮನೆಗಳನ್ನು ಮರುನಿರ್ಮಾಣ ಮಾಡುವವರೆಗೆ ಸಂತ್ರಸ್ತ ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯವನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಕುಶಾಲನಗರ ತಾಲೂಕಿನ ಜಲಾವೃತ ಪ್ರದೇಶಗಳಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಜನತೆಯ ಅಹವಾಲನ್ನು ಆಲಿಸಿದರು. ಕುಶಾಲನಗರ ತಾಲೂಕಿನ ಮಾದಾಪಟ್ಟಣ ಹಾಗೂ ಅತ್ತೂರು ಗ್ರಾಮ ಸೇರಿದಂತೆ ವಿವಿಧ ಭಾಗದ ಜಲಾವೃತವಾಗಿ ತೊಂದರೆಗೊಳಗಾದ ಜನತೆಯ ಅಹವಾಲನ್ನು ಆಲಿಸಿದರು. ಜನತೆಯೊಂದಿಗೆ ತಾವಿರುವುದಾಗಿ ಭರವಸೆ ನೀಡಿದರು. ಮೈಸೂರು ಜಿಲ್ಲೆಯ ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾಯಿ ಬಡಾವಣೆಯ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ ಗಮನ ಸೆಳೆದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ಸಂಸದರ ಜತೆಯಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಇತರರು ಇದ್ದರು.ಸಾಯಿ ಬಡಾವಣೆಯ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ ಗಮನ ಸೆಳೆದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ನೀರು ತುಂಬದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸುರಿಯುತ್ತಿರುವ ಮಳೆಯ ನಡುವೆಯೇ ಜಲಾವೃತ ಪ್ರದೇಶಗಳಿಗೆ ಸಂಸದರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಅಲ್ಲದೇ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ದೊಂದಿಗೆ ಚರ್ಚಿಸಿ, ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಸಂಸದರ ಜತೆಯಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಬಿಜೆಪಿ ಮುಖಂಡರು ಇತರರು ಇದ್ದರು.