ಮಡಿಕೇರಿ ಜು.20 NEWS DESK : ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಹಾಗೂ ಸಂತ್ರಸ್ತರ ಜೊತೆಯಲ್ಲಿ ಚರ್ಚಿಸಿ ಅವರುಗಳಿಗೆ ಧೈರ್ಯ ತುಂಬಿದರು.
ಹಾಗೂ ಅವರಿಗೆ ಅತ್ಯಗತ್ಯ ಇರುವ ಮೂಲಭೂತ ಸೌಕರ್ಯಗಳನ್ನು ಹಾಗೂ ತಾತ್ಕಾಲಿಕವಾಗಿ ವಾಸಿಸಲು ಬೇಕಾದ ವ್ಯೆವಸ್ಥೆ, ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಅನಾರೋಗ್ಯ ಬಳಲುತ್ತಿದ್ದ 2 ಬಡ ಕುಟುಂಬಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.