ಕುಶಾಲನಗರ ಜು.20 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಬೃಹತ್ ಗಾತ್ರದ ಕಲ್ಲು ಕುಸಿದು ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಸ್ಥಳೀಯ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನವಗ್ರಾಮದ ವಿಶೇಷ ಚೇತನರಾದ ಗುರುಮೂರ್ತಿ ಅವರ ಮನೆಗೆ ಬೃಹತ್ ಗಾತ್ರದ ಕಲ್ಲು ಬಿದ್ದು ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅನಾಹುತ ಸಂಭವಿಸಲಿಲ್ಲ. ಮಳೆಯ ಅವಾಂತರದಿಂದ ಅಪಘಾತ ಸಂಭವಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಗುರು ಮೂರ್ತಿ ಆಗ್ರಹಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ಮಳೆಯಿಂದಾಗಿ ಬೃಹತ್ ಗಾತ್ರದ ಕಲ್ಲು ಕುಸಿದು ಬಿದ್ದಿದೆ. ಇದರಿಂದಾಗಿ ಗುರುಮೂರ್ತಿರವರ ಮನೆಗೆ ಹಾನಿಯಾಗಿದೆ. ಇವರು ವಿಶೇಷ ಚೇತನರಾಗಿದ್ದು, ಅಧಿಕಾರಿಗಳು ಇವರ ಸಮಸ್ಯೆಯನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಬಾಸ್ಕರ್ ನಾಯಕ್, ಪಿಡಿಓ ಸಂತೋಷ್, ಗ್ರಾಮ ಲೆಕ್ಕಿಗ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಇದ್ದರು.










