ಗುಂಡ್ಲುಪೇಟೆ ಜು.20 NEWS DESK : ಕಾರು ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಎಪಿಎಂಸಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-766 ರಲ್ಲಿ ಶನಿವಾರ ರಾತ್ರಿ ನಡೆದಿದೆ. ಚಾಮರಾಜನಗರ ಅಂಬೇಡ್ಕರ್ ಬಡಾವಣೆ ನಿವಾಸಿಗಳಾದ ಮಹೇಶ್ ಹಾಗೂ ದರ್ಶನ್ ಮೃತ ದುರ್ದೈವಿಗಳು. ಚಾಲಕ ಕಿಟ್ಟಿ ಹಾಗೂ ಸಚಿನ್ ಗಾಯಾಳುಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡ್ಲುಪೇಟೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಕಾರು, ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.