Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತದ ಬಳಿ 30 ಕೋಟಿ ರೂ. ಇದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತದ ಬಳಿ 30 ಕೋಟಿ ರೂ. ಇದೆ*

ಜುಲೈ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.21 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ವೀಕ್ಷಿಸಿದರು. ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ ಜಲಪಾತ ಬಳಿ ಸೇತುವೆ ಹೀಗೆ ಮಳೆಹಾನಿ ಪ್ರದೇಶ ಹಾಗೂ ಮದಾಪುರ ಬಳಿಯ ಜಂಬೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕುಂದುಕೊರತೆ ಆಲಿಸಿದರು. ಬಳಿಕ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದುರೀತಿಯ ಹಾನಿಯಾಗಿದ್ದು, ಈ ಸಂಬಂಧ ನಷ್ಟದ ಅಂದಾಜು ಮಾಡಿ ಮುಖ್ಯಮಂತ್ರಿ ಅವರು ಹಾಗೂ ಕಂದಾಯ ಸಚಿವರಿಗೆ ವರದಿ ನೀಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು. ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಬಳಿ ಈಗಾಗಲೇ 30 ಕೋಟಿ ರೂ ಇದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದು ಸಚಿವರು ಹೇಳಿದರು. ಮನೆ ಹಾನಿ ಸಂಬಂಧ ಎನ್ ಡಿಆರ್ ಎಫ್ ನಿರ್ದೇಶನದಂತೆ ಕ್ರಮವಹಿಸಲಾಗುವುದು. ಸಂತ್ರಸ್ತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗುವುದು ಎಂದು ಎನ್.ಎಸ್.ಭೋಸರಾಜು ಅವರು ತಿಳಿಸಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಆಗಬೇಕಿರುವ ಕೆಲಸಗಳನ್ನು ಮುಖ್ಯಮಂತ್ರಿ ಅವರ ಗಮನ ಸೆಳೆಯಲಾಗುವುದು. ಪ್ರವಾಹದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮನೆ ನಿರ್ಮಾಣ ಹಾಗೂ ಜಂಬೂರು ಗ್ರಾಮದಲ್ಲಿ ಅಗತ್ಯ ಮೂಲ ಸೌಲಭ್ಯ ಸೇರಿದಂತೆ ಹಲವು ಯೋಜನೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ವಿವರಿಸಿದರು. ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿಯೂ ಮಳೆ ಇರುವುದರಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಭೋಸರಾಜು ಅವರು ನುಡಿದರು. ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಎದುರಿಸಲು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಸರ್ಕಾರ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನೂ 200 ಕೋಟಿ ರೂ ಬಿಡುಗಡೆ ಮಾಡಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು. ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಗೆ ಆಗಬೇಕಿರುವ ಕೆಲಸಗಳ ಸಂಬಂಧ ಶಾಸಕರು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿ, ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಜಂಬೂರು ಗ್ರಾಮದ ನಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಜಂಬೂರಿನಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಶೀಘ್ರ ಈ ಸಮಸ್ಯೆ ಪರಿಹರಿಸಲಾಗುವುದು ಎಂದರು. ಒಳಚರಂಡಿ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿಲ್ಲ, ಹಾಗಾಗಿ ಸಮಸ್ಯೆ ಆಗಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಮಂತರ್ ಗೌಡ ಅವರು ತಿಳಿಸಿದರು. ಜಂಬೂರು ಗ್ರಾಮದಲ್ಲಿ ಇನ್ನೂ ಖಾಲಿ ಇರುವ ಮನೆ ಹಾಗೂ ಸಂತ್ರಸ್ತರಲ್ಲದವರೂ ವಾಸ ಮಾಡುತ್ತಿರುವ ಬಗ್ಗೆ ಗಮನ ಸೆಳೆದಾಗ ಈ ಸಂಬಂಧ ಉಪ ವಿಭಾಗಾಧಿಕಾರಿ ಅವರು ಫಲಾನುಭವಿಗಳ ಪಟ್ಟಿ ಪರಿಶೀಲಿಸಿ ವರದಿ ನೀಡಲಿದ್ದಾರೆ ಎಂದು ಶಾಸಕರು ವಿವರಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಳೆ ಹಾನಿ ಬಗ್ಗೆ ಮಾಹಿತಿ ನೀಡಿ, ಎನ್ ಡಿಆರ್ ಎಫ್ ನಿರ್ದೇಶನದಂತೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಲಕ್ಷ್ಮಣ, ಕೆ.ಬಿ.ಶಾಂತಪ್ಪ, ಕೆ.ಎಂ.ಲೋಕೇಶ್, ಯಾಕುಬ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.