ಗ್ರಾ.ಪಂ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ಹೊಸಪಟ್ಟಣ ಸಮುದಾಯ ಭವನದಲ್ಲಿ ಪೂರ್ವಾಹ್ನ 11 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರು, ಎಲ್ಲಾ ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳಾಗಿ ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದೇಗೌಡ ಪಾಲ್ಗೊಳ್ಳಲಿದ್ದಾರೆ.
ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರು, ಮಹಿಳೆಯರು, ಸಂಘ ಸಂಸ್ಥೆಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾ.ಪಂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.