ಕುಶಾಲನಗರ ಜು.22 NEWS DESK : ಗುರು ಪೂರ್ಣಿಮೆ ಅಂಗವಾಗಿ ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಮತ್ತು ನಮಾಮಿ ಕಾವೇರಿ ತಂಡದ ವತಿಯಿಂದ ಐವರು ಗುರುಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದ ಬಳಿ ನಡೆದ 161ನೇ ಯ ಮಹಾ ಆರತಿ ಕಾರ್ಯಕ್ರಮದ ಸಂದರ್ಭ ನಿವೃತ್ತ ಶಿಕ್ಷಕರುಗಳಾದ ಬಾಚರಣಿಯಂಡ ಪಿ. ಅಪ್ಪಣ್ಣ, ರಾಣು ಅಪ್ಪಣ್ಣ, ಎಂ.ಹೆಚ್.ನಜೀರ್ ಅಹ್ಮದ್, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಎ.ಪಿ.ಸುಬ್ಬಯ್ಯ ಮತ್ತು ಹಿರಿಯ ಅರ್ಚಕ ಕೃಷ್ಣಮೂರ್ತಿ ಭಟ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ ಕಾವೇರಿ ಆರತಿ ಕ್ಷೇತ್ರದ ಬಳಿ ಕಾವೇರಿ ನದಿ ತಟದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕುಶಾಲನಗರ ಕಾವೇರಿ ಮಹಾ ಆರತಿ ಬಳಗ, ನಮಾಮಿ ಕಾವೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಸಮ್ಮುಖದಲ್ಲಿ ಹಿರಿಯ ಗುರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ .ಎನ್.ಚಂದ್ರಮೋಹನ್, ಬಳಗದ ಪ್ರಮುಖರಾದ ಡಿ.ಆರ್.ಸೋಮಶೇಖರ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಸುದೀಪ್ , ಅಣ್ಣಯ್ಯ, ಶಿವಕುಮಾರ್, ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಚೈತನ್ಯ, ಧರಣಿ ಸೋಮಣ್ಣ, ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಮತ್ತು ಇತರರು ಇದ್ದರು.










