ಮಡಿಕೇರಿ ಜು.22 NEWS DESK : ಸಂಘದ ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷರು ಹಾಗೂ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಸೇರಿದಂತೆ ಕೆಲವು ಪದಾಧಿಕಾರಿಗಳನ್ನು ಪದಚ್ಯುತಗೊಳಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ಇದೇ ಜು.21 ರಂದು ನಡೆದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರತಿನಿಧಿಗಳ ಸಮಾವೇಶದಲ್ಲಿ ಚರ್ಚೆ ನಡೆದು ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಕರ್ನಾಟಕ ರಾಜ್ಯ ರೈತ ಸಂಘವು ಸೈದ್ಧಾಂತಿಕ ಹಿನ್ನೆಲೆಯಲ್ಲಿ, ವೈಚಾರಿಕ ದೃಷ್ಟಿಕೋನ ಮತ್ತು ರಾಜಕೀಯ ಸ್ಪಷ್ಟತೆಯಿಂದ ಕಳೆದ 45 ವರ್ಷಗಳಿಂದ ಕೆಲಸ ಮಾಡುತ್ತಿದೆ. ಆದರೆ, ಸಂಘÀದ ಜಿಲ್ಲಾಧ್ಯಕ್ಷರಾಗಿದ್ದ ಮನು ಸೋಮಯ್ಯ ಹಾಗೂ ಕೆಲವು ಪದಾಧಕಾರಿಗಳು ಸಂಘದ ನೀತಿ ನಿಯಮಗಳಿಗೆ ಚ್ಯುತಿ ತಂದಿದ್ದಾರೆ. ಸಂಘದ ಶಿಸ್ತು ಸಮಿತಿ ತನಿಖೆ ನಡೆಸುವ ಸಂದರ್ಭ ಮನು ಸೋಮಯ್ಯ ಅವರು ಸಹಕರಿಸಿಲ್ಲ ಮತ್ತು ರಾಜ್ಯ ಸಮಿತಿಯ ನಿರ್ಧಾರವನ್ನೇ ದಿಕ್ಕರಿಸಿದ್ದಾರೆ ಎಂದು ಆರೋಪಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಚೆಟ್ರುಮಾಡ ಸುಜನ್ ಬೋಪಯ್ಯ, ಸಂಚಾಲಕ ಸುಭಾಷ್ ಸುಬ್ಬಯ್ಯ, ಕಾರ್ಯದರ್ಶಿ ಅಜ್ಜಮಾಡ ಚೆಂಗಪ್ಪ, ಖಜಾಂಚಿ ಇಟ್ಟೀರ ಸಬಿತ ಭೀಮಯ್ಯ ಅವರುಗಳನ್ನು ಕೂಡ ಪದಾಧಿಕಾರಿ ಸ್ಥಾನಗಳಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದರು.
::: ಪ್ರತ್ಯೇಕ ಕೃಷಿ ಬಡ್ಜೆಟ್‌ಗೆ ಆಗ್ರಹ :::
ಕೃಷಿ ಪ್ರಧಾನ ರಾಷ್ಟçದಲ್ಲಿ ಕೃಷಿಗೆ ವಿಶೇಷ ಆದ್ಯತೆ ನೀಡುವುದು ಅಗತ್ಯವಾಗಿದ್ದು, ಕೇಂದ್ರ ಸರ್ಕಾರ ಪ್ರತ್ಯೇಕ ‘ಕೃಷಿ ಬಡ್ಜೆಟ್’ಮಂಡಿಸಬೇಕೆAದು ರಾಜ್ಯ ರೈತ ಸಂಘ ಒತ್ತಾಯಿಸುತ್ತದೆ ಮಾತ್ರವಲ್ಲ, ಈ ಸಂಬಂಧ ಎನ್‌ಡಿಎ ಒಕ್ಕೂಟದ ಎಲ್ಲಾ ಮಿತ್ರ ಪಕ್ಷಗಳಿಗು ಪತ್ರ ಬರೆದು ಅಭಿಪ್ರಾಯ ಮೂಡಿಸಲು ಸಂಘ ನಿರ್ಧರಿಸಿದೆ ಎಂದು ರವಿಕಿರಣ್ ತಿಳಿಸಿದರು.
ಕೇಂದ್ರ ಸರ್ಕಾರ ತನ್ನ ಬಡ್ಜೆಟ್‌ನಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ರೈತ ಕುಟುಂಬದ ಕನಿಷ್ಟ ಆದಾಯ ಖಾತ್ರಿ ಯೋಜನೆಗೆ ಒತ್ತು ನೀಡಬೇಕು, ಡಾ. ಸ್ವಾಮಿನಾಥನ್ ವರದಿಯ ಅನ್ವಯ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಮತ್ತು ಸಂಪೂರ್ಣ ಉತ್ಪನ್ನದ ಖರೀದಿಯ ಖಾತರಿ ನೀಡಬೇಕು. ಕೃಷಿಗೆ ಪೂರಕವಾದ ರಸಗೊಬ್ಬರ, ಬೀಜ, ಕೀಟನಾಶಕ, ಯಂತ್ರೋಪಕರಣ ಹಾಗೂ ಟ್ರಾಕ್ಟರ್‌ಗಳ ಮೇಲೆ ಜಿಎಸ್‌ಟಿ ಹಾಕಬಾರದು. ಕೃಷಿ ಕ್ಷೇತ್ರವನ್ನು ಉತ್ತೇಜಿಸಲು ಸಹಾಯ ಧನ ನೀತಿಯನ್ನು ಪುನಃ ಜಾರಿಗೆ ತರಬೇಕೆಂದು ಆಗ್ರಹಿಸಿದರು. ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರವು ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೆ ಹಿಂದಕ್ಕೆ ಪಡೆಯಬೇಕು ಮತ್ತು ಎಪಿಎಂಸಿ ಕಾಯ್ದೆಯನ್ನು ಮತ್ತಷ್ಟು ರೈತ ಸ್ನೇಹಿಯಾಗಿ ಗಟ್ಟಿಗೊಳಿಸಬೇಕು. ರೈತರು ಕೃಷಿ ಪಂಪ್ ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ವೆಚ್ಚ ಭರಿಸಬೇಕೆನ್ನುವ ನಿರ್ಧಾರವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ರೈತ ಕುಟುಂಬಗಳು ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು ಸೇರಿದಂತೆ ಮತ್ತಿತರ ಪ್ರಮುಖ ನಿರ್ಣಯಗಳನ್ನು ರಾಜ್ಯ ಸಂಘದ ಸಭೆಯಲ್ಲಿ ಕೈಗೊಂಡಿರುವುದಾಗಿ ರವಿಕಿರಣ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಮೈಸೂರು ಜಿಲ್ಲಾ ಮುಖಂಡ ಪಿ.ಮರಂಕಯ್ಯ ಹಾಗೂ ಮೈಸೂರು ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್ ಉಪಸ್ಥಿತರಿದ್ದರು.