ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಸ್ಥೆಯ ಹಳೆಯ ವಿದ್ಯಾರ್ಥಿ ನಿವೃತ್ತ ಕೆ.ಎ.ಎಸ್ ಅಧಿಕಾರಿ ಬಿ.ಎ.ನಾಣಿಯಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ಥಾಮಸ್ ಅಲ್ವಾ ಎಡಿಸನ್ ಅವರ ವಿದ್ಯಾರ್ಥಿ ಜೀವನದ ನಿದರ್ಶನಗಳನ್ನು ನೀಡಿ ಸ್ಪೂರ್ತಿಯ ಮಾತುಗಳನ್ನಾಡಿದರು.
ಸಂಸ್ಥೆಯಲ್ಲಿ ಪ್ರಯೋಗಾಲಯ ಸಹಾಯಕರಾಗಿ ನಲ್ವತ್ತೊಂದು ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಸಿ.ಆರ್.ಅಶೋಕ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸಮಾಜದಲ್ಲಿ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಈ ಸಂಸ್ಥೆಯು ಕಾರಣವಾಯಿತು ಎಂದು ಅಶೋಕ್ ಸ್ಮರಿಸಿಕೊಂಡರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ, ಮಕ್ಕಳು ಶಿಸ್ತು ಸಂಸ್ಕಾರವನ್ನು ಮೈಗೂಡಿಸಿ ಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಕೆ.ಯು.ರೀಟಾ, ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಕೆ.ಎಸ್.ಮಂಜುನಾಥ್, ಶ್ರೀ ಹರ್ಷ ಮುದ್ದಪ್ಪ, ಎಂ.ಸಿ.ಬೋಜಮ್ಮ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಸಿ.ಜಿ.ಮಂದಪ್ಪ ಸ್ವಾಗತಿಸಿದರೆ, ಉಪನ್ಯಾಸಕಿ ಪ್ರಮೀಳಾ ನಿರೂಪಿಸಿ ವಂದಿಸಿದರು.