ಬೆಂಗಳೂರು ಜು.23 NEWS DESK : ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಸಚಿವರಾದ ಕೆ.ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ಹುಣಸೂರು, ಕೆ.ಆರ್.ನಗರ, ಕ್ಷೇತ್ರದ ಶಾಸಕರು, ಸಲಹಾ ಸಮಿತಿ ಸದಸ್ಯರು, ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಗಳು ಇತರರು ಪಾಲ್ಗೊಂಡಿದ್ದರು. ಸಭೆಯಲ್ಲಿ ಜುಲೈ 28 ರಿಂದ ಕಾಲುವೆಗಳಿಗೆ ನೀರು ಹರಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಾರಂಗಿ ನೀರಾವರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ.










