ಮಡಿಕೇರಿ ಜು.23 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರೊಡನೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ ನಡೆಸಿ ಉಚ್ಚ ನ್ಯಾಯಾಲಯದ ಆದೇಶದಂತೆ ಖಾಯಂಗೊಳಿಸಲು ಸಚಿವರಿಗೆ ಮನವಿ ಮಾಡಿದರು.
ಸಚಿವರು ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಅಶೋಕ್ ಆಲೂರು, ಎಫ್ಎಂ ಕೆಎಂಸಿ ಕಾಲೇಜಿನ ಪ್ರಾಂಶುಪಾಲ ಡಾ. ಮೇಜರ್ ಬಿ.ರಾಘವ್, ಉನ್ನತ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು, ಉಪನ್ಯಾಸಕರು ಭಾಗವಹಿಸಿದ್ದರು.