

ಮಡಿಕೇರಿ ಜು.23 NEWS DESK : ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ಮಹಿಳಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಷಿಸ್ಟಂಟ್ ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಾನಿಕ್ ಮೆಕಾನಿಕ್ ೨ ವರ್ಷ ಎನ್‌ಸಿವಿಟಿ ಯೋಜನೆ ಬಾಕಿ ಉಳಿದಿರುವ ಸೀಟುಗಳು 31 ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಷಿಸ್ಟಂಟ್(1 ವರ್ಷ) ಬಾಕಿ ಉಳಿದಿರುವ ಸೀಟುಗಳು 11 ಪ್ರವೇಶಕ್ಕೆ ಆಗಸ್ಟ್, 31 ರವರೆಗೆ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಪ್ರವೇಶ ಮಾಡಲಾಗುವುದು.
ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ಮಹಿಳಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.