ಮಡಿಕೇರಿ ಜು.24 NEWS DESK : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯುಆರ್‌ಡಬ್ಲ್ಯು/ವಿಆರ್‌ಡಬ್ಲ್ಯು ಹುದ್ದೆಗಳು ಖಾಲಿ ಇದ್ದು ಬೌದ್ಧಿಕ ವಿಕಲತೆ ಹಾಗೂ ಮಾನಸಿಕ ಅಸ್ವಸ್ಥರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಆ.23 ರೊಳಗೆ ಅರ್ಜಿ ಸಲ್ಲಿಸಬಹುದು.
ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‌ಡಬ್ಲ್ಯು) ಮಾಸಿಕ ಗೌರವಧನ ರೂ. 9 ಸಾವಿರ, ಎಸ್‌ಎಸ್‌ಎಲ್‌ಸಿ ಉತ್ತೀರ್ಣ, ಅನುತ್ತೀರ್ಣ, ಶೇ.40ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್‌ಡಬ್ಲ್ಯು) ಮಾಸಿಕ ಗೌರವಧನ ರೂ.9 ಸಾವಿರ, ಎಸ್‌ಎಸ್‌ಎಲ್‌ಸಿ ಉತ್ತೀರ್ಣ, ಅನುತ್ತೀರ್ಣ ಶೇ.೪೦ ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಹುದ್ದೆಗಳು ಖಾಲಿ ಇರುವ ವಿವರ: ಯುಆರ್‌ಡಬ್ಲ್ಯು: ನಗರಸಭೆ ಮಡಿಕೇರಿ, ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿ.
ವಿಆರ್‌ಡಬ್ಲ್ಯು: ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಬೇಂಗೂರು, ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ತಿತಿಮತಿ, ಶ್ರೀಮಂಗಲ.ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲ್ಯು ಗಳಿಂದ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಛೇರಿಗೆ ಅಥವಾ ಎಂಆರ್‌ಡಬ್ಲ್ಯುಗಳಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ- 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–8073192914 ಸಂಖ್ಯೆಗಳನ್ನು ಹಾಗೂ ಕಛೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.