ಮಡಿಕೇರಿ ಜು 25 NEWS DESK : ಕೊಡಗಿನಲ್ಲಿ ನೂರಾರು ಪ್ರಾಚೀನ ಸ್ಮಾರಕಗಳಿದ್ದು ಇವುಗಳ ಸಂರಕ್ಷಣೆ ನಿಟ್ಟಿನಲ್ಲಿ ಸಾವ೯ಜನಿಕರೂ ಅಗತ್ಯ ಸಹಕಾರ ನೀಡಬೇಕೆಂದು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ.ರೇಖಾ ಕೋರಿದ್ದಾರೆ.
ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆಯೋಜಿತ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಕೊಡಗು ಜಿಲ್ಲೆಯಲ್ಲಿ ಈವರೆಗೆ ದೊರಕಿದ ಅನೇಕ ಪ್ರಾಚೀನ ಮಹತ್ವದ ಸ್ಮಾರಕಗಳ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.
ಪ್ರಾಚೀನ ಸ್ಮಾರಕಗಳು ನಮ್ಮ ದೇಶದ ಭವ್ಯ ಇತಿಹಾಸದ ಮಹತ್ವವನ್ನು ಸಾರಿ ಹೇಳುತ್ತವೆ, ಇಂಥ ಸ್ಮಾರಕಗಳ ಸಂರಕ್ಷಣೆ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂರಕ್ಷಣೆಗೆ ಸಾವ೯ಜನಿಕರೂ ಸಹಕಾರ ನೀಡುವಂತೆ ರೇಖಾ ಮನವಿ ಮಾಡಿದರು.
ಕೊಡಗು ಜಿಲ್ಲೆಯಲ್ಲಿಯೂ ಐತಿಹಾಸಿಕ ಸ್ಮಾರಕಗಳನ್ನು ದತ್ತು ಪಡೆದು ನಿವ೯ಹಿಸಲು ಸಂಘಸಂಸ್ಥೆಗಳು ಸಿದ್ದರಿದ್ದರೆ ಅದಕ್ಕೆ ಕೂಡ ಅವಕಾಶ ಇದೆ ಎಂದೂ ಅವರು ಮಾಹಿತಿ ನೀಡಿದರು, ವೀರಗಲ್ಲು, ಮಾಸ್ತಿಗಲ್ಲು ಸೇರಿದಂತೆ ಪ್ರಾಚೀನ ದೇವಾಲಯಗಳು, ಶಿಲೆಗಳು ಕಂಡುಬಂದಲ್ಲಿ ಅವುಗಳ ಬಗ್ಗೆ ಮಾಹಿತಿಯನ್ನು ಕೊಡಗು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡುವಂತೆಯೂ ರೇಖಾ ವಿನಂತಿಸಿದರು.
ಕಾಯ೯ಕ್ರಮದಲ್ಲಿ ರೋಟರಿ ವುಡ್ಸ್ ಅಧ್ಯಕ್ಷ ಕಿಗ್ಗಾಲು ಹರೀಶ್, ಕಾಯ೯ದಶಿ೯ ಕಿರಣ್ ಕುಂದರ್, ಸಹಾಯಕ ಗವನ೯ರ್ ದೇವಣಿರ ಕಿರಣ್, ರೋಟರಿ ವುಡ್ಸ್ ಮಾಜಿ ಅಧ್ಯಕ್ಷರಾದ ಎಸ್.ಎಸ್.ಸಂಪತ್ ಕುಮಾರ್, ವಸಂತ್ ಕುಮಾರ್ ಸೇರಿದಂತೆ ರೋಟರಿ ಪ್ರಮುಖರು ಹಾಜರಿದ್ದರು.