ಮಡಿಕೇರಿ ಜು.24 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ರ್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಆಗಸ್ಟ್, 31 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್ಸೈಟ್ www.sahithyaacademy.karnataka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಎನ್.ಕರಿಯಪ್ಪ ಅವರು ತಿಳಿಸಿದ್ದಾರೆ.