ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ0ತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 63.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 96.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1770.53 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1063.37 ಮಿ.ಮೀ ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 9 ಇಂಚು ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 54.90 ಮಿ.ಮೀ. ಕಳೆದ ವರ್ಷ ಇದೇ ದಿನ 133.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2428.60 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1772.32 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 111.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1650.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 864.21 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.94 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 81.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1682.07 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 882.70 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 130.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 106.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2002.86 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1122.36 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 52 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1088.50 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 675.25 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 24, ನಾಪೋಕ್ಲು 69.20, ಸಂಪಾಜೆ 20, ಭಾಗಮಂಡಲ 106.40, ವಿರಾಜಪೇಟೆ 43, ಅಮ್ಮತ್ತಿ 46, ಹುದಿಕೇರಿ 123.70, ಶ್ರೀಮಂಗಲ 95, ಪೊನ್ನಂಪೇಟೆ 43, ಬಾಳೆಲೆ 26.09, ಸೋಮವಾರಪೇಟೆ ಕಸಬಾ 110.80, ಶನಿವಾರಸಂತೆ 86, ಶಾಂತಳ್ಳಿ 216, ಕೊಡ್ಲಿಪೇಟೆ 105.40, ಕುಶಾಲನಗರ 5.60, ಸುಂಟಿಕೊಪ್ಪ 25.20 ಮಿ.ಮೀ.ಮಳೆಯಾಗಿದೆ.
ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಕೆ.ಜೆ.ಪಾರ್ವತಿ ಜೋಯಪ್ಪ ಅವರ ವಾಸದ ಮನೆ ಗೋಡೆ ಮತ್ತು ಛಾವಣಿ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯ ಜೇಡಿಗುಂಡಿ ಎಂಬಲ್ಲಿ ಬೃಹತ್ ಬರೆ ಕುಸಿದು ಬಿದ್ದಿದೆ. ಇದೇ ಮಾರ್ಗದಿಂದ ಹಾದು ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಅಪಾಯದಿಂದ ಪಾರಾಗಿದೆ. ಮಣ್ಣು ಕುಸಿಯುತ್ತಿದ್ದಂತೆ ಚಾಲಕ ಬಸ್ ನ್ನು ನಿಲ್ಲಿಸಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.