ಮಡಿಕೇರಿ ಜು.25 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ(ಓವರ್‌ಸೀಸ್) ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ (OVERSEAS EDUCATION) ಸಾಲ ಯೋಜನೆಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ https://kmdconline.karnataka.gov.in/ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂರಾವಾಣಿ ಸಂಖ್ಯೆ 08272-201449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.