ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಅವರು ವಿದ್ಯಾರ್ಥಿಗಳಿಗೆ ಪಾದರಕ್ಷೆಗಳನ್ನು ವಿತರಿಸಿ ಮಾತನಾಡಿ, ಸರ್ಕಾರದಿಂದ ಎಲ್ಲ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ದೊರೆಯುತ್ತಿದ್ದು, ಇದನ್ನ ಸದಾವಕಾಶವಾಗಿ ಬಳಸಿಕೊಂಡು, ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿಯಿಂದ ತೊಡಗಿಸಿಕೊಳ್ಳಬೇಕು. ಹಾಗಾದರೆ ಮಾತ್ರ ಸರಕಾರದ ಇಂತಹ ಯೋಜನೆಗಳಿಗೆ ಅರ್ಥ ಲಭಿಸಲಿದೆ ಎಂದು ಕಿವಿಮಾತು ಹೇಳಿದರು.
ಶಾಲಾ ಮುಖ್ಯೋಪಾಧ್ಯಾಯರಾದ ವೇದಪ್ರಸಾದ್, ಶಾಲಾ-ಸಹ ಶಿಕ್ಷಕರು ಹಾಜರಿದ್ದರು.