ಮಡಿಕೇರಿ ಜು.26 NEWS DESK : ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲಾವ್ಯಾಪಿ ಅಪಾರ ಹಾನಿ ಸಂಭವಿಸಿದ್ದು, ಮುಂಜಾಗೃತಾ ಕ್ರಮವಾಗಿ ಜು.27 ರಂದು ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜ್ ಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೆ ದಾಖಲೆಯ 100 ಇಂಚು ಮಳೆಯಾಗಿದೆ. ಗಾಳಿಯ ರಭಸದಿಂದ ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಮರಗಳು, ವಿದ್ಯುತ್ ಕಂಬಗಳು, ಬರೆಗಳು, ಮನೆಗಳು ಧರೆಗುರುಳಿವೆ.
ವ್ಯಾಪಕ ಮಳೆಯಿಂದ ಸೋಮವಾರಪೇಟೆ – ಶಾಂತಳ್ಳಿ ಮುಖ್ಯ ರಸ್ತೆಯ ಜೇಡಿಗುಂಡಿ ಬಳಿ ನಿರಂತರವಾಗಿ ಬರೆ ಕುಸಿಯುತ್ತಿದ್ದು, ರಸ್ತೆ ಸಂಪೂರ್ಣ ಮುಚ್ಚಿ ಹೋಗಿದೆ. ಜೆಸಿಬಿ ಗಳ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಕೊಡ್ಲಿಪೇಟೆಯ ಶಿವರಳ್ಳಿ ಗ್ರಾಮದ ಲಕ್ಷ÷್ಮಮ್ಮ, ಸಂಪಿಗೆದಾಳು ಗ್ರಾಮದ ಭಾಗ್ಯ, ಶನಿವಾರಸಂತೆ ಹೋಬಳಿಯ ವಡಯನಪುರ ಗ್ರಾಮದ ಗೌರಮ್ಮ, ಶನಿವಾರಸಂತೆಯ ಬಿಲಾಳ, ಹಾರೆ ಹೊಸೂರು ಗ್ರಾಮದ ಗಂಗಾಧರ ಅವರ ಮನೆಗಳಿಗೆ ಭಾರೀ ಗಾಳಿ ಮಳೆಯಿಂದ ಹಾನಿಯಾಗಿದೆ. ಸಂಪಾಜೆ ಹೋಬಳಿ ವ್ಯಾಪ್ತಿಯ ಚಡಾವು ಎಂಬಲ್ಲಿ ಸುಲೇಖ ಎಂಬುವರಿಗೆ ಸೇರಿದ ಮನೆ ಬಿದ್ದಿದ್ದು, ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ತಾಲ್ಲೂಕಿನ ಬೈರಂಬಾಡ ಶಾಲೆಯ ಕಟ್ಟಡಕ್ಕೆ ಬೃಹತ್ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಮರ ಬಿದ್ದು ಹಾನಿಯಾಗಿದ್ದು, ಮರ ತೆರವುಗೊಳಿಸುವ ಕಾರ್ಯ ನಡೆದಿದೆ. ಶನಿವಾರಸಂತೆ ಹೋಬಳಿಯ ಮಾಲಂಬಿ ಬಳಿ ಕುಶಾಲನಗರ- ಶನಿವಾರಸಂತೆ ರಸ್ತೆಯಲ್ಲಿ ಬೃಹತ್ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಶಾಲನಗರ ಹೋಬಳಿಯ ಹೆಬ್ಬಾಲೆ ಗ್ರಾಮದ ವೇದಾವತಿ ರಮೇಶ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದೆ. ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮದ ಸುಭಾಷ್ ನಗರದಲ್ಲಿ ವೇದಾವತಿ ಎಂಬುವವರ ಮನೆಯ ಮೇಲೆ ಮರ ಬಿದ್ದಿದ್ದು ತೆರವು ಕಾರ್ಯಾಚರಣೆ ನಡೆಯಿತು. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಚೆಂಬು ಗ್ರಾ.ಪಂ ವ್ಯಾಪ್ತಿಯ ದಬ್ಬಡ್ಕ ಶಾಲೆಯ ಪಕ್ಕದಲ್ಲಿದ್ದ ಪ್ರಯಾಣಿಕರ ತಂಗುದಾಣದ ಮೇಲೆ ಮರ ಬಿದ್ದಿದ್ದು, ತಂಗುದಾಣ ನೆಲಸಮಗೊಂಡಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಲೆಕ್ಕವಿಲ್ಲದಷ್ಟು ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿದ್ದು, ವಿವಿಧ ಗ್ರಾಮಗಳು ಕಳೆದ ಒಂದು ವಾರದಿಂದ ವಿದ್ಯುತ್ ಇಲ್ಲದೆ ಪರಿತಪಿಸುವಂತ್ತಾಗಿದೆ.
::: 100 ಇಂಚು ಮಳೆ :::
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4 ಇಂಚು, ಕಳೆದ ವರ್ಷ ಇದೇ ದಿನ 3ಇಂಚು ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 100 ಇಂಚಿಗೂ ಅಧಿಕ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 73 ಇಂಚು ಮಳೆಯಾಗಿತ್ತು. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 88.15 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 41.82 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1858.69 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1105.19 ಮಿ.ಮೀ ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1729.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 895.56 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 98.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1780.86 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 909.88 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 120.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.78 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2123.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1174.14 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 24.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1128.40 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 699.85 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 47.20, ನಾಪೋಕ್ಲು 134.20, ಸಂಪಾಜೆ 48.50, ಭಾಗಮಂಡಲ 180, ವಿರಾಜಪೇಟೆ 78, ಅಮ್ಮತ್ತಿ 80, ಹುದಿಕೇರಿ 134.10, ಶ್ರೀಮಂಗಲ 153, ಪೊನ್ನಂಪೇಟೆ 67, ಬಾಳೆಲೆ 41.19, ಸೋಮವಾರಪೇಟೆ ಕಸಬಾ 122.80, ಶನಿವಾರಸಂತೆ 73, ಶಾಂತಳ್ಳಿ 200, ಕೊಡ್ಲಿಪೇಟೆ 86.60, ಕುಶಾಲನಗರ 17.60, ಸುಂಟಿಕೊಪ್ಪ 62.20 ಮಿ.ಮೀ.ಮಳೆಯಾಗಿದೆ.
::: ಹಾರಂಗಿಯಿಂದ ನದಿಗೆ ನೀರು :::
ಹಾರಂಗಿ ಜಲಾಶಯದಿಂದ ನದಿಗೆ 13916 ಕ್ಯುಸೆಕ್ ನೀರು ಬಿಡಲಾಗುತ್ತಿದ್ದು, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 12625 ಕ್ಯುಸೆಕ್ ಆಗಿತ್ತು. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.88 ಅಡಿಗಳು. ಕಳೆದ ವರ್ಷ ಇದೇ ದಿನ 2853.13 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 32.60 ಮಿ.ಮೀ., ಕಳೆದ ವರ್ಷ ಇದೇ ದಿನ 15.60 ಮಿ.ಮೀ., ಇಂದಿನ ನೀರಿನ ಒಳಹರಿವು 9288 ಕ್ಯುಸೆಕ್, ಕಳೆದ ವರ್ಷ ಇದೇ ದಿನ 12861 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು