Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : 2018, 2019, 2020 ರಲ್ಲಿ ಆಗಸ್ಟ್ ತಿಂಗಳಿನಲ್ಲೇ ಅಧಿಕ ಮಳೆಯಾಗಿದೆ : ಹಾಗಾಗಿ ಮತ್ತಷ್ಟು ಮುನ್ನೆಚ್ಚರ ವಹಿಸಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : 2018, 2019, 2020 ರಲ್ಲಿ ಆಗಸ್ಟ್ ತಿಂಗಳಿನಲ್ಲೇ ಅಧಿಕ ಮಳೆಯಾಗಿದೆ : ಹಾಗಾಗಿ ಮತ್ತಷ್ಟು ಮುನ್ನೆಚ್ಚರ ವಹಿಸಬೇಕು*

ಜುಲೈ 26, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.26 NEWS DESK : ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿ ಉತ್ತಮವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಜಲಾಶಯಗಳು, ಜಲಪಾತಗಳು, ಹಳ್ಳ ಕೊಳ್ಳ, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಇದರಿಂದ ಅಂತರ್ಜಲವು ಸಹ ಹೆಚ್ಚಾಗಿದೆ. ಹೀಗಾಗಿ ಯಾವುದೇ ರೀತಿ ಹಾನಿ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಕಳೆದ 2018, 2019, 2020 ರಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಹಾಗಾಗಿ ಮತ್ತಷ್ಟು ಮುನ್ನೆಚ್ಚರ ವಹಿಸಬೇಕು, ಜನ-ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ವೆಂಕಟ್ ರಾಜಾ ಅವರು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ರಸ್ತೆಗಳು, ಸೆಸ್ಕ್ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳು, ಸರ್ಕಾರಿ ಶಾಲಾ-ಕಾಲೇಜು ಕಟ್ಟಡಗಳು, ಸರ್ಕಾರಿ ಕಚೇರಿಗಳು, ಮನೆ ಹಾಗೂ ಬೆಳೆ ಹಾನಿ ಹೀಗೆ ವಿವಿಧ ರೀತಿಯ ಹಾನಿಯಾಗಿದ್ದು, ಇದನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಈಗಾಗಲೇ ಹೆಚ್ಚಿನ ಮಳೆಯಾಗಿ ಶ್ರೀಮಂಗಲ-ಕುಟ್ಟ ರಸ್ತೆ, ಶಾಂತಳ್ಳಿ ರಸ್ತೆ ಹೀಗೆ ಹಲವು ರಸ್ತೆಗಳು ಹೆಚ್ಚಿನ ಹಾನಿಯಾಗಿದ್ದು, ಈ ಸಂಬAದ ಮರಳು, ಜಲ್ಲಿಯನ್ನು ತುಂಬಿ ಸರಿಪಡಿಸುವ ಕಾರ್ಯವಾಗಬೇಕು. ಬ್ಯಾರಿಕೇಡ್ ಅಳವಡಿಸಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಗಮನಹರಿಸಬೇಕು ಎಂದು ಸೂಚಿಸಿದರು. ಸಾರಿಗೆ ಸಂಪರ್ಕದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾದಲ್ಲಿ, ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತಂದು ಪರ್ಯಾಯ ಸಾರಿಗೆ ಸಂಪರ್ಕ ಕಲ್ಪಿಸಬೇಕು. ಯಾರಿಗೂ ತೊಂದರೆಯಾಗದAತೆ ಗಮನಹರಿಸುವುದು ಅತೀಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹೆಚ್ಚಿನ ಗಾಳಿ ಮಳೆಯಿಂದ ಮನೆ ಹಾನಿಯಾದಲ್ಲಿ ಅಥವಾ ಇತರೆ ಸಮಸ್ಯೆಗಳು ಉಂಟಾದಲ್ಲಿ ಅಂತಹ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸುವಂತೆ ತಹಶೀಲ್ದಾರರಿಗೆ ತಿಳಿಸಿದರು. ತಹಶೀಲ್ದಾರರು, ತಾ.ಪಂ.ಇಒಗಳು, ಅರಣ್ಯ, ಸೆಸ್ಕ್, ಅಗ್ನಿಶಾಮಕ ದಳ, ಹೀಗೆ ಹಲವು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯತೆಯಿಂದ ಮುಂದಿನ ದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಮನೆ ಹಾನಿಗೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ 24 ಗಂಟೆಯೊಳಗೆ ಪರಿಹಾರ ವಿತರಿಸಬೇಕು. ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಪ್ರಾಕೃತಿಕ ವಿಕೋಪ ನಿರ್ವಹಿಸಬೇಕು ಎಂದರು. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಈಗಾಗಲೇ ಹೋಬಳಿ ಮಟ್ಟದಲ್ಲಿ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ವಿವಿಧ ರೀತಿಯ ಹಾನಿ ಮತ್ತಿತರ ಸ್ಥಿತಿಗತಿ ಬಗ್ಗೆ ಪ್ರತಿನಿತ್ಯ ವರದಿ ನೀಡಬೇಕು. ತುರ್ತು ಕಾರ್ಯವಿದ್ದಲ್ಲಿ ನೇರವಾಗಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಜಿಲ್ಲೆಯ ಹಲವು ಕಡೆಗಳಲ್ಲಿ ಶಾಲಾ ಕಟ್ಟಡಕ್ಕೆ ಹಾನಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಅರಣ್ಯ, ಅಗ್ನಿಶಾಮಕ ಹೀಗೆ ಪ್ರತಿ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಉತ್ತಮವಾಗಿ ಸ್ಪಂದನೆ ಇದೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳು, ನಗರ, ಪಟ್ಟಣ… ಎಲ್ಲೆಡೆ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಹೆಚ್ಚಿನ ಅರಿವು ಮೂಡಿಸಬೇಕು. ಡೆಂಗ್ಯೂ ನಿಯಂತ್ರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಜಿಲ್ಲೆಯಲ್ಲಿ 14 ಕ್ರಿಯಾಶೀಲ ಪ್ರಕರಣಗಳು ಇದೆ. ಡೆಂಗ್ಯೂ ನಿಯಂತ್ರಣಕ್ಕೆ ವಾರಕ್ಕೊಮ್ಮೆ ಲಾರ್ವ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು. ಪೌರಾಡಳಿತ ಇಲಾಖೆಯ ಎಇಇ ಹೇಮಂತ್ ಕುಮಾರ್ ಅವರು ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಗೆ ಹೆಚ್ಚಿನ ಮನೆಗಳು ಹಾನಿಯಾಗುತ್ತಿದ್ದು, ಇಂತಹ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಜೊತೆಗೆ ಟಾರ್ಪಲ್ ವಿತರಣೆ ಮಾಡಲಾಗುತ್ತಿದೆ ಎಂದರು. ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಪಂಚಾಯತ್ ರಾಜ್ ಎಂಜಿನಿಯರ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ನವೀನ್ ಕುಮಾರ್, ರಾಮಚಂದ್ರ ಹಾಗೆಯೇ ತಾ.ಪಂ.ಇಒ ಗಳಾದ ಶೇಖರ್, ಅಪ್ಪಣ್ಣ, ಇತರರು ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಬಸಪ್ಪ, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಪೌರಾಯುಕ್ತರಾದ ವಿಜಯ್ ಮತ್ತಿತರರು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.