Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೋಮವಾರಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ : ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು

*ಸೋಮವಾರಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ : ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಕೆ*

July 27, 20242 Mins Read
Share
Facebook Twitter LinkedIn Pinterest WhatsApp Email

ಸೋಮವಾರಪೇಟೆ ಜು.27 NEWS DESK : ಜೈ ಜವಾನ್ ಮಾಜೀ ಸೈನಿಕರ ಸಂಘದ ಆಶ್ರಯದಲ್ಲಿ ಪಟ್ಟಣದ ಪತ್ರಿಕಾಭವನ ಸಭಾಂಗಣದಲ್ಲಿ  ಕಾರ್ಗಿಲ್  ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಈರಪ್ಪ  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜೀ ಸೈನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದೇಶಾಭಿಮಾನಿಗಳು ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಈರಪ್ಪ, ಕಾರ್ಗಿಲ್ ಯುದ್ಧದ ಸಂದರ್ಭ ದೇಶದ ಗಡಿಯಲ್ಲಿ ಆದ ಬೆಳವಣಿಗೆ, ಹುತಾತ್ಮರಾದ ಸೈನಿಕರ ಕೆಚ್ಚೆದೆಯ ಹೋರಾಟ, ಪಾಕಿಸ್ತಾನದ ಕಪಟ ಬುದ್ಧಿಯ ಬಗ್ಗೆ ವಿವರಿಸಿದರು.
ಈಗಾಗಲೇ ಭಾರತದೊಳಗೆ ಅಕ್ರಮವಾಗಿ ಬಾಂಗ್ಲಾ ವಲಸಿಗರು ನುಗ್ಗಿದ್ದು, ಇವರಿಂದ ದೇಶದ ಆಂತರಿಕ ಭದ್ರತೆಗೆ ಆತಂಕವಿದೆ. ಒಂದು ವೇಳೆ ಯುದ್ಧದ ಸನ್ನಿವೇಶ ನಿರ್ಮಾಣವಾದರೆ ದೇಶದ ಗಡಿಯಲ್ಲಿರುವ ಸೈನಿಕರಷ್ಟೇ ಮಂದಿ ದೇಶದ ಆಂತರಿಕ ಭದ್ರತೆಗೂ ಬೇಕಾಗುತ್ತದೆ. ಈ ವಿಷಯದ ಬಗ್ಗೆ ಗಂಭೀರ ಚಿಂತನೆ ಹರಿಸಬೇಕಿದೆ ಎಂದರು.
ರೋಟರಿ ಸಂಸ್ಥೆಯ ಅಧ್ಯಕ್ಷ ಸಿ.ಕೆ.ಶಿವಕುಮಾರ್ ಮಾತನಾಡಿ, ಕಾರ್ಗಿಲ್ ಯುದ್ಧದಿಂದ ಭಾರತದ ಸೈನ್ಯದ ಪರಾಕ್ರಮ ಇಡೀ ವಿಶ್ವಕ್ಕೆ ಮನದಟ್ಟಾಗಿದೆ. ಹಗಲೂ ರಾತ್ರಿಯೆನ್ನದೆ ದೇಶದ ಗಡಿ ಕಾಯುತ್ತಿರುವ ಸೈನಿಕರ ಸೇವೆಯನ್ನು ಸ್ಮರಿಸಬೇಕು. ಅವರ ತ್ಯಾಗಕ್ಕೆ ಸ್ಥೆöರ‍್ಯ ತುಂಬಬೇಕು. ಯುವ ಜನಾಂಗ ದೇಶ ಸೇವೆಯ ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕೊಡಗು ಜಿಲ್ಲಾ ಯೋಧಾಭಿಮಾನಿ ಬಳಗದಿಂದ ರಚನೆಗೊಂಡಿರುವ ಅಮರ್ ಜವಾನ್ ಪ್ರತಿಮೆಗೆ ಕರ‍್ಯಕ್ರಮದಲ್ಲಿ ಪುಷ್ಪರ‍್ಚನೆ ಮಾಡಿ, ಸೈನಿಕರನ್ನು ಸ್ಮರಿಸಲಾಯಿತು.

ರೋಟರಿ ಮಾಜೀ ಅಧ್ಯಕ್ಷ ಮಹೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್, ಹಿಂದೂ ಜಾಗರಣಾ ವೇದಿಕೆಯ ಸುಭಾಷ್ ತಿಮ್ಮಯ್ಯ, ಎಂ.ಬಿ. ಉಮೇಶ್, ಸಿ.ಕೆ. ಅಕಾಡೆಮಿಯ ಮುಖ್ಯಸ್ಥ ಚಂದ್ರಕುಮಾರ್, ಮೋಟಾರ್ ಯೂನಿಯನ್ ಅಧ್ಯಕ್ಷ ಬಾಲಕೃಷ್ಣ ಸೇರಿದಂತೆ ಮಾಜೀ ಸೈನಿಕರುಗಳು, ಮಹಿಳಾ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಾಗರಣಾ ವೇದಿಕೆಯಿಂದ: ಹಿಂದೂ ಜಾಗರಣಾ ವೇದಿಕೆಯ ಸೋಮವಾರಪೇಟೆ ತಾಲೂಕು ಘಟಕದಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕರ‍್ಯಕ್ರಮ ನಡೆಯಿತು. ಅಗಲಿದ ಸೈನಿಕರ ಸ್ಮರಣೆಯೊಂದಿಗೆ ಪುಷ್ಪನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜೀ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ, ಹಿಂದೂ ಜಾಗರಣಾ ವೇದಿಕೆಯ ಪ್ರಮುಖರಾದ ಬೋಜೇಗೌಡ, ಸುಭಾಷ್, ಎಂ.ಬಿ. ಉಮೇಶ್, ಪ್ರಮುಖರಾದ ಕೂತಿ ಪರಮೇಶ್, ರೂಪಾ ಸತೀಶ್, ದಯಾನಂದ, ಮಣಿ ಕುಶಾಲಪ್ಪ ಬಾಲಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸೂರ್ಲಬಿ, ಹಮ್ಮಿಯಾಲ, ಮಾಂದಲಪಟ್ಟಿ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಮನವಿಗೆ ಬೆಲೆಯೇ ಇಲ್ಲ*
Next Article *ಕೊಡವೋಲೆ ತ್ರೈಮಾಸಿಕ ಸಂಚಿಕೆಗೆ ಸ್ವ-ರಚಿತ ಬರಹಗಳ ಆಹ್ವಾನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.